ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಅವರು ಸದನದಲ್ಲಿ, ಇಂದು ಹಳೆಯ ಶಾಲಾ ಕಟ್ಟಡಗಳು ದುರಸ್ತಿಯಾಗದೇ ತಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮರದ ಕೆಳಗೆ ಪಾಠಮಾಡುವ ಪರಿಸ್ಥಿತಿ ಬಂದಿದೆ ಎಂದು ಸರ್ಕಾರದ ಗಮನ ಸೆಳೆದರು.
ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಕೈಗಾರಿಕೆಗಳು ಮತ್ತು ಖಾಸಗಿ ಕಂಪನಿಗಳ ಸಿಎಸ್‌ಆರ್‌ಫಂಡ್‌ಬಳಸಿ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸುವಂತೆ ದೇವೇಗೌಡರು ಆಗ್ರಹಿಸಿದರು.