ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಅಧಿವೇಶದಲ್ಲಿ ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಡಿದ ಅಶ್ಲೀಲ ಪದ ಬಳಕೆಯಿಂದ ಸಾಕಷ್ಟು ನೊಂದಿರುವ ಲಕ್ಷ್ಮಿಹೆಬ್ಬಾಳ್ಕರ್ ಪರವಾಗಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಈ ಮಧ್ಯೆ ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ನೀಡಿ ಅಗತ್ಯ ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.
ದೂರಿನಲ್ಲಿ ಏನಿದೆ
?

ಬೆಳಗಾವಿ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಕ್ಟರ್ ಅವರಿಗೆ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಇಡೀ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಕಾಂಗ್ರೆಸ್ ಕೋರಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಮಾತನಾಡಿ, ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪ ನಡೆಯಬೇಕಾದರೆ ಸಭಾಪತಿಗಳು ಕಲಾಪ ಮುಂದೂಡಿಕೆ ಮಾಡಿರುತ್ತಾರೆ. ಆ ದೃಶ್ಯಾವಳಿಗಳನ್ನ ಮಾಧ್ಯಮಗಳ ಮೂಲಕ ಗಮನಿಸಿದ್ದೇವೆ. ಸಭಾಪತಿಗಳಿಗೆ‌ಲಕ್ಷ್ಮೀ ಹೆಬ್ಬಾಳ್ಕರ್ ದೂರನ್ನ ಮಾಡುತ್ತಾರೆ.

ಅವಾಚ್ಯ ಪದಗಳಿಂದ ನನ್ನನ್ನ ಮಾತನಾಡಿಸಿದ್ದಾರೆ. ಅಂತ ದೂರನ್ನ ಕೊಡುತ್ತಾರೆ. ವಿಧಾನ ಪರಿಷತ್ ಸದಸ್ಯರು ಸಹ ದೂರನ್ನ ಕೊಡುತ್ತಾರೆ. ಸಭಾಪತಿಗಳ ಜೊತೆಯೂ ನಾನು ಮಾತನಾಡಿದೆ. ಪರಸ್ಪರ ಇಬ್ಬರೂ ಮಾತುಗಳನ್ನ ಆಡಿದ್ದಾರೆ. ಸದನದ ಮುಂದೂಡಿಕೆ ಆದ ಮೇಲೆ ವಾಕ್ಸಮರ ನಡೆದಿದೆ. ಸಭಾಪತಿಗಳಿಗೆ ಪತ್ರ ಬರೆದಿದ್ದೇನೆ, ಉನ್ನತ ಮಟ್ಟತ ತನಿಖಾ‌ತಂಡ ರಚಿಸಬೇಕಿದೆ. ಪ್ರಕರಣ ಕುರಿತು ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ವಿರುದ್ಧ ವಾಗ್ದಾಳಿ-
ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಸಿಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ
ಸಿ.ಟಿ. ರವಿ ಅವರ ಮೇಲೆ ಕ್ರಮಕ್ಕೆ ಸಭಾಪತಿಗೆ ಪತ್ರ ಬರೆಯುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹೇಳಿದ್ದಾರೆ. ಮಹಿಳಾ ಆಯೋಗ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬಾಣಂತಿಯರ ಸಾವಿನ ಬಗ್ಗೆ ಧ್ವನಿ ಎತ್ತಿಲ್ಲ. ಆದರೆ ಪಕ್ಷದ ವಿಚಾರ ಬಂದಾಗ ಮಹಿಳಾ ಆಯೋಗದ ಅಧ್ಯಕ್ಷರು ಧ್ವನಿ ಎತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

 

- Advertisement -  - Advertisement - 
Share This Article
error: Content is protected !!
";