ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ ಕರ್ನಾಟಕ ಕಾಂಗ್ರೆಸ್ ಸರ್ಕಾರ! ಎಂದು ಬಿಜೆಪಿ ಹರಿಹಾಯ್ದಿದೆ.
ಪರಿಷತ್ಸದಸ್ಯರು ಹಾಗೂ ಮಾಜಿ ಸಚಿವರಾದ ಸಿ. ಟಿ. ರವಿ ಅವರನ್ನು ಅಕ್ರಮವಾಗಿ ಬಂಧಿಸಿ, ಅಮಾನವೀಯವಾಗಿ ನಡೆಸಿಕೊಂಡು,
ಬಳಿಕ ನ್ಯಾಯಾಲಯಕ್ಕೆ ಹಾಜರಿಪಡಿಸುವ ವೇಳೆ ರಾಜ್ಯ ಕಾಂಗ್ರೆಸ್ಸರ್ಕಾರದ ದ್ವೇಷದ ರಾಜಕೀಯ ವಿರೋಧಿಸಿ ಸಿಟಿ ರವಿ ಅವರಿಗೆ ನೈತಿಕ ಬೆಂಬಲ ಘೋಷಿಸಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಉಪನಾಯಕರಾದ ಅರವಿಂದ್ ಬೆಲ್ಲದ್, ಸೇರಿದಂತೆ ಬಿಜೆಪಿ ಶಾಸಕರು, ಸಂಸದರು, ಪದಾಧಿಕಾರಿಗಳು ಸಾಥ್ ನೀಡಿದರು.
ಕಾಂಗ್ರೆಸ್ಸಿನ ದ್ವೇಷದ ರಾಜಕೀಯ ಹೆಚ್ಚು ದಿನ ನಡೆಯುವುದಿಲ್ಲ, ಈ ಅನ್ಯಾಯದ ವಿರುದ್ಧ ರಾಜ್ಯ ಬಿಜೆಪಿ ಗಟ್ಟಿಯಾಗಿ ಧ್ವನಿ ಎತ್ತಲಿದೆ ಎಂದು ಬಿಜೆಪಿ ತಿಳಿಸಿದೆ.