ಭೀಕರ ಅಪಘಾತ ಕಾರು ಅಪ್ಪಚ್ಚಿ, 6 ಮಂದಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಆರು ಮಂದಿ ದಾರುಣವಾಗಿ ಸಾವು ಕಂಡಿದ್ದಾರೆ.

ನೆಲಮಂಗಲ ತಾಲೂಕಿನ ಟಿ. ಬೇಗೂರು ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಅದರಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮೂವರು ಮಕ್ಕಳು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಕಂಟೇನರ್​ವೊಂದು ಡಿವೈಡರ್​ ಗೆ ಡಿಕ್ಕಿ ಹೊಡೆದು ಹಾರಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೂವರು ಮಕ್ಕಳು
, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ಆರು ಮಂದಿ ಸಾವು ಕಂಡಿದ್ದಾರೆ.

ಉದ್ಯಮಿ ಚಂದ್ರ ಯಗಪಗೋಳ, 16 ವರ್ಷದ ಜಾನ್, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, 36 ವರ್ಷದ ವಿಜಯಲಕ್ಷ್ಮಿ, 42 ವರ್ಷದ ಗೌರಬಾಯಿ ಮೃತ ದುರ್ದೈವಿಗಳು.

ಸರಣಿ ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು 10 ಕಿಲೋ ಮೀಟರ್​ವರೆಗೂ ಸಂಚಾರಕ್ಕೆ ಅಡ್ಡಿಯಾಗಿದ್ದು ಪೊಲೀಸರು ವಾಹನಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಬೆಂಗಳೂರು ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ಮನವಿ ಮಾಡಿ ರಕ್ಷಣಾ ಕಾರ್ಯಗಳಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

- Advertisement -  - Advertisement - 
Share This Article
error: Content is protected !!
";