ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ಆದಾಯ ವೃದ್ಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಮೈತ್ರಿ ಸರ್ಕಾರ ಹೊಸ ವರ್ಷಕ್ಕೆ ಬಂಪರ್ ಕೊಡುಗೆ ನೀಡಿದೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.
ಕೊಬ್ಬರಿಗೆ ಬೆಂಬಲ ಬೆಲೆ (MSP) 420 ರೂ. ಹೆಚ್ಚಿಸುವ ಮೂಲಕ ಕೇಂದ್ರದ ಎನ್ ಡಿ ಎ ಸರ್ಕಾರ ಅನ್ನದಾತರ ನೆರವಿಗೆ ಬಂದಿದೆ. ಇದರಿಂದ ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜೆಡಿಎಸ್ ವಿಶ್ವಾಸ ವ್ಯಕ್ತಪಡಿಸಿದೆ.
ಇಡೀ ದೇಶದ ಕೊಬ್ಬರಿ ಉತ್ಪಾದನೆ ಪೈಕಿ ಕರ್ನಾಟಕದ ಪಾಲು ಶೇ.32.7 ರಷ್ಟಿದೆ. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಸನ್ಮಾನ್ಯ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಚೌಹಾಣ್ ಬಳಿ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿ ಕ್ವಿಂಟಲ್‌ಉಂಡೆ ಕೊಬ್ಬರಿಗೆ 12,100 ರೂ. ಮತ್ತು ಹೋಳಾದ ಕೊಬ್ಬರಿಗೆ 11,582 ರೂ. ಬೆಂಬಲ ಬೆಲೆ ನಿಗದಿ ಮಾಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜೆಡಿಎಸ್ ತಿಳಿಸಿದೆ.