ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಸೋಮವಾರ 129.20 ಅಡಿಗೆ ಏರಿಕೆಯಾಗಿದೆ.
ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿ ದಿನ 462 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿ ನಿತ್ಯ ಒಂದು ಪಂಪ್ ರನ್ ಮಾಡಿ ವಿವಿ ಸಾಗರಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 462 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಹರಿಯಲಿದೆ. ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.