ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಶಿಕಾರಿಪುರ:
ಉತ್ತಮ ಆಡಳಿತ ದಿನದ ಅಂಗವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಚಾಲನೆ ನೀಡಿದ್ದಾರೆ”.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಾಲ್ಕನೇ ಸುಶಾಸನ ಸಪ್ತಾಹದ ಅಂಗವಾಗಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಡಿಸೆಂಬರ್ 25 ರವರಿಗೆ ದೇಶಾದ್ಯಂತ ನಡೆಯುವ ಮಹತ್ವಪೂರ್ಣ ಸಪ್ತಾಹದ ಪ್ರಯುಕ್ತ ಸಂಸದರಾದ ಬಿ.ವೈ ರಾಘವೇಂದ್ರ ಅವರ ಸಮ್ಮುಖದಲ್ಲಿ ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಅಪೇಕ್ಷೆಯಂತೆ ನೂತನ ಬಸ್ ಸಾರಿಗೆ ಸಂಚಾರಕ್ಕೆ ಚಾಲನೆ ನೀಡಿ,

ತಿಮ್ಲಾಪುರ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನದ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ತಾಲ್ಲೂಕು ಮಟ್ಟದಲ್ಲಿ ವಿಶೇಷ ಶಿಬಿರ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಪರಿಹಾರಕ್ಕೆ ಉತ್ತಮ ಆಡಳಿತ ದಿನದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";