ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯದಲ್ಲಿ ಆಯೋಜಿಸಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪವಾದಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗಿಯಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ನಾಡೋಜ ಗೊ.ರು.ಚನ್ನಬಸಪ್ಪ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳವರು, ಅವಧೂತರಾದ ಶ್ರೀ ವಿನಯ್ ಗುರೂಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಸಮಾರೋಪ ಭಾಷಣ ಮಾಡಿದ ಹಿರಿಯ ಸಾಹಿತಿಗಳಾದ ಸಿ.ಪಿ.ಕೃಷ್ಣಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕಪಾಲ್ ಸದಸ್ಯರಾದ ನ್ಯಾ.ಎಲ್. ನಾರಾಯಣಸ್ವಾಮಿ,
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ, ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕ ಮಿತ್ರರು, ಸಾಹಿತಿಗಳು, ಸಾಹಿತ್ಯಾಸಕ್ತರು, ಮಂಡ್ಯ ಜಿಲ್ಲೆಯ ಮಹಾಜನರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.