ಕಾಂಗ್ರೆಸ್  ಸರ್ಕಾರದ ವೈಫಲ್ಯಕ್ಕೆ ಹಿಡಿದ “ಕೈ”ಗನ್ನಡಿ ಬಾಣಂತಿಯರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯ ವಿಮ್ಸ್‌ಸೇರಿದಂತೆ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವುಗಳು ಕರ್ನಾಟಕ ಕಾಂಗ್ರೆಸ್  ಸರ್ಕಾರದ ವೈಫಲ್ಯಕ್ಕೆ ಹಿಡಿದ “ಕೈ”ಗನ್ನಡಿ ಎಂದು ಜೆಡಿಎಸ್ ಆರೋಪಿಸಿದೆ.

ಸಿದ್ದರಾಮಯ್ಯ ಸರ್ಕಾರದ ಹೊಣೆಗೇಡಿತನ ಹಾಗೂ ನಿರ್ಲಕ್ಷ್ಯವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರೇ ಸ್ವತಃ ಆಸ್ಪತ್ರೆಗಳಿಗೆ ಭೇಟಿ ನೀಡಿ ಕಣ್ಣಾರೆ ಕಂಡಿದ್ದು ರಿಪೋರ್ಟ್‌ಕಾರ್ಡ್‌ಕೊಟ್ಟಿದ್ದಾರೆ ಎಂದು ಜೆಡಿಎಸ್ ದೂರಿದೆ.

ಬಾಣಂತಿಯರು ಮತ್ತು ಕಂದಮ್ಮಗಳು ಪ್ರಾಣ ಕಳೆದುಕೊಳ್ಳುತ್ತಿದ್ದರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಬಿಟ್ಟು ಆಚೆ ಬರುತ್ತಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.

 ಆರೋಗ್ಯ ಇಲಾಖೆಯನ್ನೇ ಸಂಪೂರ್ಣ ಹಳ್ಳಹಿಡಿಸಿರುವ ಆರೋಗ್ಯ ಮಂತ್ರಿ ದಿನೇಸ್ ಗುಂಡೂರಾವ್ ಗೆ ಆತ್ಮಸಾಕ್ಷಿ ಇದ್ದಿದ್ದರೇ ನೈತಿಕಹೊಣೆ ಒತ್ತು ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು.

ಸಾವಿನ ಕೂಪವಾಗಿರುವ ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಗಳ ಬಗ್ಗೆ ಎಚ್ಚೆತ್ತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

- Advertisement -  - Advertisement - 
Share This Article
error: Content is protected !!
";