ಅದ್ಧೂರಿಯಾಗಿ ನಡೆದ ಅಯ್ಯಪ್ಪ ಸ್ವಾಮಿ ಬ್ರಹ್ಮೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಮದೇಹಳ್ಳಿ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ  ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಭಾನುವಾರ ಅದ್ಧೂರಿಯಾಗಿ ಜರುಗಿತು.

ಜನತೆಗೆ ವಿಶೇಷ ಮಹಾ ಅನ್ನದಾನದ ಕಾರ್ಯಕ್ರಮದ ಉದ್ಘಾಟನೆಯನ್ನು ಕೆ ಎನ್ ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವ್ಯ ವಿಜಯಕುಮಾರ್ ಮಾಡಿದರು. ವರ್ತಕ ಉದಯ ಶೆಟ್ಟಿ, ವೈದ್ಯ ಡಾ.ಹನುಮಂತರೆಡ್ಡಿ, ಮಾಜಿ ಗ್ರಾಪಂ ಅಧ್ಯಕ್ಷ ಉಜ್ಜಿನಿ ಸ್ವಾಮಿ, ವರ್ತಕ ಸತೀಶ್ ಮತ್ತಿತರರು ಭಾಗವಹಿಸಿದ್ದರು.

 ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದುರ್ಗದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.

2025ರ ಜನವರಿ-13 ಸೋಮವಾರ ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ ನೀಲಕಂಠೇಶ್ವರ ದೇವಸ್ಥಾನದಿಂದ ಹೊರಟು ನಗರದ ಪ್ರಮುಖ ಬೀದಿಗಳ ಮುಖಾಂತರ ಶ್ರೀ ಸನ್ನಿಧಾನವನ್ನು ತಲುಪುವುದು.

ಜ.14 ಮಂಗಳವಾರ ಸಂಜೆ ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಿಸಲಾಗುವುದು. ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಸಕಲ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷ ಶರಣ್ ಕುಮಾರ್,

ದೇವಸ್ಥಾನದ ಕಾರ್ಯದರ್ಶಿ ಎಂ.ಪಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ ಹಾಗೂ ದೇವಸ್ಥಾನದ ನಿರ್ದೇಶಕರು ಮನವಿ ಮಾಡಿದ್ದಾರೆ. 

 

- Advertisement -  - Advertisement - 
Share This Article
error: Content is protected !!
";