ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐತಿಹಾಸಿಕ ಮೈಸೂರು ನಗರದ ಕೆಆರ್‌ಎಸ್‌ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ” ಎಂದು ಹೆಸರಿಡಲು ಹೊರಟಿರುವ ಮೈಸೂರು ಮಹಾನಗರ ಪಾಲಿಕೆಯ ತೀರ್ಮಾನ ಖಂಡನೀಯ ಎಂದು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.
ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದು ವಂಚಿಸಿರುವ A1 ಆರೋಪಿ, 420 ಸಿದ್ದರಾಮಯ್ಯ ನ್ಯಾಯಾಲಯ ಹಾಗೂ ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಮಂಡಳಿ ಅಸ್ತಿತ್ವದಲ್ಲಿಲ್ಲ. ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳು ಸಿದ್ದರಾಮಯ್ಯನ ಋಣ ತೀರಿಸಲು ಅವರ ಹೆಸರಿಡಲು ನಿರ್ಣಯಕೈಗೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಮುಡಾವನ್ನು ಮುಕ್ಕಿ ತಿಂದಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನ ಹೆಸರನ್ನು ರಸ್ತೆಗೆ ನಾಮಕರಣ ಮಾಡುವುದು, ಐತಿಹಾಸಿಕ ನಗರಿ ಮೈಸೂರಿಗಷ್ಟೆ ಅಲ್ಲ ಇಡೀ ರಾಜ್ಯಕ್ಕೆ ಎಸಗುವ ದ್ರೋಹ ಮತ್ತು ಅಪಮಾನ ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.