ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನಾ ಬಲಪಡಿಸಲು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜಪೀರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಸೈಯದ್ ಖುದ್ದುಸ್, ಜಿಲ್ಲೆಯ ವಿವಿಧ ತಾಲೂಕು ಅಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ನೇಮಕವನ್ನು ಹಸ್ತಾಂತರ ಮಾಡಲಾಯಿತು.
ಚಿತ್ರದುರ್ಗ ತಾಲೂಕು ಗ್ರಾಮಾಂತರ ಅಧ್ಯಕ್ಷ ಸ್ಥಾನಕ್ಕೆ ಇರ್ಫಾನ್ ಉಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಿಮ್ ರಾಜ್ ಜೈನ್, ಇರ್ಫಾನ್ ಪಟೇಲ್, ಸಿರಾಜುದ್ದೀನ್, ರಿಯಾಜ್ದ್ದೀನ್ ಕುರುಬ್ರಳ್ಳಿ, ಫಜಲೂರ್ ರೆಹಮಾನ್ ಮತ್ತು ಜಿಲ್ಲಾ ಕಾರ್ಯದರ್ಶಿಯಾಗಿ ಇಬ್ರಾಹಿಂ, ನೂರ್ ಅಮೀನ್, ಸಿದ್ದಿಕ್ ರವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್ ರವರು ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮ ಸಡಗರದಿಂದ ಆಚರಿಸಲು ಇದೇ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ‘ಗಾಂಧಿ ಭಾರತ‘ ಕಾರ್ಯಕ್ರಮದಡಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು ಇದರ ಸಲುವಾಗಿ ಜಿಲ್ಲೆಯಿಂದ ಹೆಚ್ಚು ಸಂಖ್ಯೆಯಲ್ಲಿ ಬರಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಪದವೀಧರ ಘಟಕದ ಅಧ್ಯಕ್ಷ ಪ್ರಕಾಶ್ ರಾಮ ನಾಯಕ್, ಅಧ್ಯಕ್ಷ ಸಮಿಉಲ್ಲಾ ಸೇರಿದಂತೆ ಮತ್ತಿತರ ಮುಖಂಡರು ಭಾಗಿಯಾಗಿದ್ದರು.