ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಹಾಗೂ ಚಿತ್ರಾ ಡಾನ್ಬೋಸ್ಕೋ ಶಾಲೆ ಸಹಯೋಗದಲ್ಲಿ, ಡಾನ್ ಬೋಸ್ಕೊ ಪದವಿ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಪರಿಷ್ಕೃತ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ–೨೦೧೬ ನೀತಿ ಕುರಿತು ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಾಗಿತ್ತು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಪಿ.ಯು.ಡಿಡಿ ಪುಟ್ಟಸ್ವಾಮಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶೀಲಾ.ಪಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತ.ಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪವಿತ್ರ.ಓ,
ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಬನ್ನಿ, ಸಂಪನ್ಮೂಲ ವ್ಯಕ್ತಿ ಹರೀಶ್ ಜೋಗಿ ಸೇರಿದಂತೆ ಪಿಯು ಕಾಲೇಜು, ಐಟಿಐ, ಡಿಪ್ಲೊಮೋ ಪಾಲಿಟೆಕ್ನಿಕ್ ಕಾಲೇಜು ಉಪಸ್ಥಿರಿದ್ದರು.