ಅರಣ್ಯ ವಲಯದಲ್ಲಿ 32 ನಾಡ ಬಾಂಬ್ ಪತ್ತೆ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್​ಗಳು ಪತ್ತೆ ಆಗಿದ್ದು ಆತಂಕ ಸೃಷ್ಠಿಯಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್​ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್​ ಇಟ್ಟಿದ್ದರು ಎನ್ನಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು KA 68 E 5881, KA 31 J 2307 ಸಂಖ್ಯೆಯ 2 ಬೈಕ್ ಬಿಟ್ಟು ನಾಲ್ವರು ಪರಾರಿ ಆಗಿದ್ದಾರೆ. ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ 2 ಬೈಕ್​ಗಳನ್ನು ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸ್ಕೆಚ್ ಹಾಕಿರುವುದು ತಿಳಿದುಬಂದಿದೆ.

ಬಾಂಬ್ ಇಡಲು ಬಂದಿದ್ದ ನಾಲ್ವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಎಂಬುದು ತಿಳಿದುಬಂದಿದೆ. ಆರೋಪಿತ ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೈಲಿಗೆ ಕಳುಹಿಸಿದ್ದಾರೆ. ಉಳಿದ ಇಬ್ಬರ ಮಾಹಿತಿಯನ್ನು ನ್ಯಾಮತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಹಿಂದೆಯೂ ಆರೋಪಿಗಳು ಇದೇ ಅರಣ್ಯದಲ್ಲಿ ನಾಡಬಾಂಬ್ ಇಟ್ಟಿದ್ದರು ಎನ್ನಲಾಗಿದೆ.

 

- Advertisement -  - Advertisement - 
Share This Article
error: Content is protected !!
";