ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯಲ್ಲಿ “ಗಾಂಧಿ ಭಾರತ” ಹೆಸರಿನಲ್ಲಿ ಹಾಕಿಸಿರುವ ಭಾರತದ ನಕ್ಷೆಯಲ್ಲಿ ಕಾಶ್ಮೀರ ಭೂಭಾಗವನ್ನೇ ಕೈಬಿಟ್ಟಿದೆ ಇಟಲಿ ಕಾಂಗ್ರೆಸ್ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಭಾರತದ ನಕ್ಷೆಯನ್ನು ತಿರುಚುವುದು, ಮಾರ್ಪಾಡು ಮಾಡುವುದು ದೇಶದ್ರೋಹದಂತಹ ಗಂಭೀರ ಅಪರಾಧಿ ಕೃತ್ಯ. ಕರ್ನಾಟಕ ಕಾಂಗ್ರೆಸ್ ಸಮಾವೇಶದ ನೇತೃತ್ವ ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದಕ್ಕೆ ನೇರಹೊಣೆಗಾರರು.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಆದರೆ ವೋಟಿಗಾಗಿ ಓಲೈಕೆ ರಾಜಕಾರಣ ಮಾಡುತ್ತ ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸುವ ಭಾರತೀಯ ಕಾಂಗ್ರೆಸ್ ದೇಶದ್ರೋಹದ ಮನಸ್ಥಿತಿ ಬ್ಯಾನರ್ ಗಳಿಂದ ಜಗಜ್ಜಾಹೀರಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.