ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪಿಸಿದೆ.
ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ.
ಡಿಸೆಂಬರ್ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್ ಸೇವೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.