ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಅಭಿನಂದನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

ಹಾಸನದ ಗಾಂಧಿ ಭವನದಲ್ಲಿ ಡಿ.30ರಂದು ಬೆಳಿಗ್ಗೆ 10.45ಕ್ಕೆ ಆಯೋಜಿಸಿರುವ ಅಭಿನಂದನಾ ಕಾರ್ಯಕ್ರಮವನ್ನು ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಸಾಹಿತಿ ಎಲ್.ಹನುಮಂತಯ್ಯ ಉದ್ಘಾಟಿಸುವರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮೊದಲ ಮಾತುಗಳನ್ನಾಡಲಿದ್ದು, ರಂಗಸಿರಿ ಅಧ್ಯಕ್ಷ ಕೆ.ರಂಗಸ್ವಾಮಿ ಅಧ್ಯಕ್ಷತೆ ವಹಿಸುವರು.

- Advertisement - 

ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ಸ್ವಾಗತಿಸಲಿದ್ದಾರೆ.

 

- Advertisement - 

 

Share This Article
error: Content is protected !!
";