ಡಾ.ಮನಮೋಹನ್ ಸಿಂಗ್ ಅವರ ಸಾವಿನಲ್ಲೂ ರಾಜಕೀಯ ಮಾಡಿ ಮೊಸಳೆ ಕಣ್ಣೀರಿಡುತ್ತಿರುವ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸಾವಿನಲ್ಲೂ ರಾಜಕೀಯ ಮಾಡಿ ಮೊಸಳೆ ಕಣ್ಣೀರಿಡುತ್ತಿರುವ ಕಾಂಗ್ರೆಸ್ ಪಕ್ಷ ಮನಮೋಹನ್ ಸಿಂಗ್ ಅವರ ರಾಜಕೀಯ ಗುರು, ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರನ್ನ ಹೇಗೆ ನಡೆಸಿಕೊಂಡಿತ್ತು ಎಂದು ದೇಶದ ಜನತೆ ಇನ್ನೂ ಮರೆತಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ನರಸಿಂಹ ರಾವ್ ಅವರ ಪಾರ್ಥಿವ ಶರೀರ ಇಡುವುದಿರಲಿ, ನವದೆಹಲಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಸುವುದಕ್ಕೂ ನೆಹರೂ-ಗಾಂಧಿ ಕುಟುಂಬ ಅವಕಾಶ ನೀಡಿಲಿಲ್ಲ. ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ,

ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ ಟ್ರಬಲ್ ಶೂಟರ್ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಶೋಕ್ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದಾಗ ಸೋನಿಯಾ ಗಾಂಧಿ ಅವರು ಕನಿಷ್ಠ ಪಕ್ಷ ಸಂತಾಪವನ್ನೂ ವ್ಯಕ್ತಪಡಿಸಲಿಲ್ಲ.

ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಸನದಲ್ಲಿ ನಡೆಸಲು ಉದ್ದೇಶಿಸಿದ್ದ ಸ್ವಾಭಿಮಾನಿ ಸಮಾವೇಶವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೂಲಕ ಹೈಜಾಕ್ ಮಾಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡಿದ್ದೂ ಸಹ ನೆಹರು-ಗಾಂಧಿ ಪರಿವಾರದ ಕಪಿಮುಷ್ಠಿಯಲ್ಲಿರುವ

ಕಾಂಗ್ರೆಸ್ ಪಕ್ಷ ಮುಂದೆ ಸಿದ್ದರಾಮಯ್ಯನವರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದಕ್ಕೆ ಟ್ರೈಲರ್. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು. ಮಿಕ್ಕವರೆಲ್ಲರೂ ಗುಲಾಮರು ಎಂದು ಆರ್.ಅಶೋಕ್ ಟೀಕಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";