ಇಬ್ಬರು ಮಕ್ಕಳಿಗೆ ವಿಷ ಹಾಕಿಕೊಂದು ನೇಣಿಗೆ ಶರಣಾದ ಸಾಫ್ಟವೇರ್ ದಂಪತಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಕ್ಕಳ ಬದುಕು ರೂಪಿಸಬೇಕಾದ ಪೋಷಕರೇ ಮಕ್ಕಳ ಜೀವನವನ್ನೇ ಮುಗಿಸಿಬಿಟ್ಟಿದ್ದಾರೆ. ಏನು ಅರಿಯದ ಆ ಮುದ್ದು ಮಕ್ಕಳು ತನ್ನ ಹೆತ್ತವರಿಂದಲೇ ಕೊಲೆಯಾಗಿದ್ದು ಜಗತ್ತು ನೋಡುವ ಮುನ್ನವೇ ಸಾವಿನ ಮನೆ ಸೇರಿದ್ದಾರೆ ಎನ್ನುವುದನ್ನ ನಂಬಲಸಾಧ್ಯವಾದರು ನಂಬಲೇಬೇಕಾಗಿದೆ.

ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದಲ್ಲಿರುವ ಮನೆಯೊಂದರಲ್ಲಿ ಸಾಫ್ಟವೇರ್ ಉದ್ಯೋಗಿಗಳಾದ ಪೋಷಕರು ಇಬ್ಬರು ಮಕ್ಕಳನ್ನು ಕೊಂದ ಬಳಿಕ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಅನೂಪ್ (38)
, ಅವರ ಪತ್ನಿ ರಾಖಿ (35) ಮತ್ತು ಐದು ಹಾಗೂ ಎರಡು ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಮಕ್ಕಳಿಬ್ಬರಿಗೂ ವಿಷ ನೀಡಿ ಕೊಂದ ಬಳಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಸದಾಶಿವ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ನ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೆಲ ವರ್ಷಗಳಿಂದ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅನೂಪ್ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿದ್ದರು. ಆರ್ಥಿಕ ನಷ್ಟದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.
ಬೆಳಿಗ್ಗೆ ಮನೆಗೆಲಸದಾಕೆ ಬಂದಾಗ ಘಟನೆ ಬಗ್ಗೆ ಗೊತ್ತಾಗಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು
, ಅವರು ನಗರಕ್ಕೆ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ. ಘಟನಾ ಸ್ಥಳದಲ್ಲಿ ಮರಣಪತ್ರ ಪತ್ತೆಯಾಗಿಲ್ಲ ಎಂದು ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ. ಶೇಖರ್ ಮಾಹಿತಿ ನೀಡಿದ್ದಾರೆ.

ಅನೂಪ್ ಅವರ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಮಗಳು ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದು, ಖಿನ್ನತೆಗೆ ಒಳಗಾಗಿದ್ದರು. ಬೆಳಗ್ಗೆ 11 ಗಂಟೆಗೆ ಪುದುಚ್ಚೇರಿಗೆ ಹೋಗುತ್ತಿದ್ದು, ಬೇಗ ಮನೆಗೆ ಬರುವಂತೆ ಕೆಲಸದವರಿಗೆ ಹೇಳಿದ್ದರು.

ಹೀಗಾಗಿ ಕೆಲಸದವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆಗೆ ನಿಯೋಜನೆ ಗೊಂಡಿದ್ದರೆ, ಒಬ್ಬರು ಮಗು ನೋಡಿ ಕೊಳ್ಳುತ್ತಿದ್ದರು. ಮೂವರಿಗೂ ತಿಂಗಳಿಗೆ ತಲಾ 15 ಸಾವಿರ ಸಂಬಳ ನೀಡುತ್ತಿದ್ದರು ಎನ್ನಲಾಗಿದೆ.

ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ಭಾನುವಾರ ರಾತ್ರಿ 10 ಗಂಟೆಯವರೆಗೂ ದಂಪತಿ ಎಂದಿನಂತೆಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.
ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು
, ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";