ಇಸ್ರೋ ಮುಖ್ಯಸ್ಥರಾಗಿ ವಿ.ನಾರಾಯಣನ್ ನೇಮಕ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ.
ಹಾಲಿ ಮುಖ್ಯಸ್ಥ ಎಸ್.ಸೋಮನಾಥ್ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಜನವರಿ 14ರಂದು ನಿವೃತ್ತರಾಗಲಿದ್ದಾರೆ.

ವಿ.ನಾರಾಯಣನ್ ಯಾರು:
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (
LPSC) ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರು ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷ ಹುದ್ದೆಯಲ್ಲಿರುತ್ತಾರೆ.

ನಾರಾಯಣನ್ ಅವರು ಆದಿತ್ಯ ಬಾಹ್ಯಾಕಾಶ ನೌಕೆ ಮತ್ತು GSLV MK-III ಮಿಷನ್‌ನಂತಹ ಪ್ರಮುಖ ಯೋಜನೆಗಳಿಗೆ ಗಮನಾರ್ಹ ಕೊಡುಗೆ ನೀಡಿದವರು. ಇವರ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿಮತ್ತು IIT ಖರಗ್‌ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿನೀಡಿ ಗೌರವಿಸಲಾಗಿತ್ತು.

ಶಿಕ್ಷಣ: ಐಐಟಿ ಖರಗ್‌ಪುರದಿಂದ ನಾರಾಯಣನ್ ಅವರು ಕ್ರಯೋಜೆನಿಕ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಎಂ.ಟೆಕ್‌ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದರು. 1984ರಲ್ಲಿ ಇಸ್ರೋ ಸೇರಿದ ಇವರು ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್​ ವಿಭಾಗದಲ್ಲಿ ಪರಿಣತರು. 2018ರಲ್ಲಿ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್‌ನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

 

- Advertisement -  - Advertisement - 
Share This Article
error: Content is protected !!
";