ರಾಜ್ಯದ ಹಲವು ರಸ್ತೆ ಅಭಿವೃದ್ಧಿ ಮಾಡಲು ನಿತಿನ್ ಗಡ್ಕರಿ ಜೊತೆ ಕುಮಾರಸ್ವಾಮಿ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸಿದರು.

ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಾರಿಗೆ ಸಚಿವರು; ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು.

ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು.

ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ.

ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42).

ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69).

ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69.

NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ.

ಈ ಎಲ್ಲಾ ಯೋಜನೆಗಳ ಬಗ್ಗೆ ಮಾನ್ಯ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದರು.

 

- Advertisement -  - Advertisement - 
Share This Article
error: Content is protected !!
";