ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಡುಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಳೆದೊಂದು ವರ್ಷದಲ್ಲಿ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ನೀಡಿರುವ ಅನುದಾನ ಕುರಿತು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದೆ.
ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ, ಕಾಂಗ್ರೆಸ್ ವಿವಿಧ ನಿಗಮಗಳಿಗೆ ನೀಡಿದ ಅನುದಾನ ಬಹಳಷ್ಟು ಕಡಿಮೆ ಎಂಬುದು ಸರ್ಕಾರ ನೀಡಿರುವ ದತ್ತಾಂಶಗಳಿಂದ ಸ್ಪಷ್ಟವಾಗಿದೆ ಎಂದು ಬಿಜೆಪಿ ತರಾಟೆ ತೆಗೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರೆ, ಕರ್ನಾಟಕದ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ..??!! ಏಕೆ ಎಂದು ಬಿಜೆಪಿ ಪ್ರಶ್ನಿಸಿದೆ.