ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ. ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಆತ್ಮಹತ್ಯೆ ಮಾಡಿಕೊಂಡ ಸಚಿನ್ಪಾಂಚಾಳ್ ಬರೆದಿರುವ ಡೆತ್ನೋಟ್ನಲ್ಲಿ ಪ್ರಿಯಾಂಕ್ಖರ್ಗೆ ಸೇರಿದಂತೆ ಪ್ರಿಯಾಂಕ್ಖರ್ಗೆಯ 9 ಮಂದಿ ಅತ್ಯಾಪ್ತರ ಹೆಸರು ಉಲ್ಲೇಖಗೊಂಡಿದೆ. ಆದರೆ ಸಿಐಡಿ ತನಿಖೆ ಆರಂಭವಾಗಿ 13 ದಿನ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಪ್ರಕರಣದಲ್ಲಿ ಕೇವಲ ಕರ್ನಾಟಕ ಕಾಂಗ್ರೆಸ್ ಸಚಿವರ, ಸರ್ಕಾರದ ಪ್ರಭಾವವಲ್ಲದೆ, ಎಐಸಿಸಿ ಪ್ರಭಾವವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕುಟುಂಬ ಕೇಂದ್ರೀಕೃತವಾಗಿ ತನಿಖೆ ನಡೆಸದಂತೆ ತನಿಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.