ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ ಎಂದು ಅಶೋಕ್ ಹರಿಹಾಯ್ದಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.