ವಿವಿ ಸಾಗರ ಜಲಾಶಯ ಭರ್ತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಾಣಿ ವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ  ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ.

  ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು

ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";