ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕು ಹಾಡೋನಹಳ್ಳಿಯಲ್ಲಿ ನಡೆದ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಅಪ್ಪಯ್ಯಣ್ಣ ಅವರ ನುಡಿನಮನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಅಪ್ಪಯ್ಯಣ್ಣನವರ ಪುತ್ರ ನಾಗರಾಜ್, ಅವರ ಕುಟುಂಬ ಸದಸ್ಯರು ಮತ್ತು ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳ ಮುನಿಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಇ.ಕೃಷ್ಣಪ್ಪ, ಚೌಡರೆಡ್ಡಿ ತೂಪಲ್ಲಿ, ಹೆಚ್.ಎಂ.ರಮೇಶ್ ಗೌಡ ಮುಂತಾದ ನಾಯಕರು, ಅನೇಕ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.