ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕಾರ್ಯಕರ್ತರಿಗೆ ಧೈರ್ಯ ತುಂಬಲು ಕಾನೂನು ಪ್ರಕೋಷ್ಠ ಹೆಚ್ಚು ಸಮರ್ಪಿಸಿಕೊಳ್ಳಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೂಚನೆ ನೀಡಿದರು.
ಬೆಂಗಳೂರಿನ ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾನೂನು ಪ್ರಕೋಷ್ಠದ ವತಿಯಿಂದ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮರ್ಪಣಾ ಭಾವದಿಂದ ಶ್ರಮಿಸುತ್ತಿರುವ ಕಾನೂನು ಪ್ರಕೋಷ್ಠವು ಪಕ್ಷದ ಮುಂಬರುವ ಎಲ್ಲ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಂಡು ವಿರೋಧ ಪಕ್ಷವಾಗಿ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಎದುರಾಗಬಹುದಾದ ಸುಳ್ಳು ಮೊಕದ್ದಮೆಗಳು, ಹಿಂದೂ ಕಾರ್ಯಕರ್ತರ ಮೇಲೆ ಅನಾವಶ್ಯಕವಾಗಿ ಹೇರುತ್ತಿರುವ ದ್ವೇಷಪೂರಿತ ಪ್ರಕರಣಗಳೂ ಸೇರಿದಂತೆ ಕಾನೂನು ಸಮಸ್ಯೆಗಳಿಗೆ ಮುಂದಾಳತ್ವ ವಹಿಸಿ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಶ್ರಮಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಎನ್.ವಿ. ಫಣೀಶ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕ ಲಕ್ಷ್ಮಣ್ ಸಿ. ಕುಲಕರ್ಣಿ ಸೇರಿದಂತೆ ಕಾನೂನು ಪ್ರಕೋಷ್ಠದ ಪದಾಧಿಕಾರಿಗಳು, ಉಪಸ್ಥಿತರಿರಲಿದ್ದಾರೆ.