ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರಿಗೆ ಅನುಕೂಲವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಪ್ರಧಾನಮಂತ್ರಿ ಫಸಲ್‌ಬಿಮಾ ಯೋಜನೆ ರಾಜ್ಯದಲ್ಲಿ ಹಳಿ ತಪ್ಪುತ್ತಿರುವುದು ನಿಜಕ್ಕೂ ಆತಂಕಕಾರಿಯಾದ ಸಂಗತಿ!! ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲೆಂದು, ಫಲಾನುಭವಿಗಳಿಗೆ ನೇರವಾಗಿ ತಲುಪಲು ಡಿಬಿಟಿಯಂತಹ ಉಪಕ್ರಮಗಳನ್ನು ಜಾರಿಗೆ ತಂದಿದ್ದರೂ, ಮಧ್ಯವರ್ತಿಗಳ ಹಾವಳಿ ಕರ್ನಾಟಕದಲ್ಲಿ ಶುರುವಾಗಿರುವುದು ಯೋಜನೆಯನ್ನು ಬುಡಮೇಲು ಮಾಡುವಂತಹ ಸಂಗತಿ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರೆ, ಕೃಷಿ ಸಚಿವ ಚಲುವನಾರಾಯಣಸ್ವಾಮಿ ಅವರೆ, ಕೂಡಲೇ ಈ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ವಿಶೇಷ ತಂಡ ರಚಿಸಿ, ರೈತರ ಹಿತಾಸಕ್ತಿಯನ್ನು ಕಾಪಾಡಿ ಎಂದು ಬಿಜೆಪಿ ತಾಕೀತು ಮಾಡಿದೆ.