ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಒಬಿಸಿ ಘಟಕದ ಪ್ರಭಾರಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ ಶ್ರೀನಿವಾಸ್ ನೇಮಕಗೊಂಡಿದ್ದಾರೆ.
ಮುಂದುವರೆದು ಡಿ.ಟಿ ಶ್ರೀನಿವಾಸ್ ಅವರನ್ನು ಕೆಪಿಸಿಸಿ ವ್ಯಾಪ್ತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿಗೆ ಶಿಫಾರಸು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಹಾಲಿ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದಾಗಿ ಸಂಘಟನೆಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀನಿವಾಸ್ ಅವರನ್ನ ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.