ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕೆಲ ಕಿವಿ ಮಾತುಗಳನ್ನು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ನೀಡಿ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಸಿಟಿ ರವಿ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆಗೆ, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ ಚಟ್ನಳ್ಳಿ ಮಹೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿರುಪಾಕ್ಷ ಜಿ.ಬಿ, ಹಾಗೂ ಕಾಲೇಜಿನ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮುಂತಾದವರು ಉಪಸ್ಥಿತರಿದ್ದರು.