ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯವನ್ನು ಖಂಡಿಸಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮತಾಂಧರ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ.
ಹೀಗಾಗಿಯೇ ಚಾಮರಾಜಪೇಟೆಯಲ್ಲಿ ಹಸುಗಳೇ ಇಲ್ಲದಂತೆ ಮಾಡಲು ಮತಾಂಧರಿಗೆ ಸುಪಾರಿ ಕೊಟ್ಟವರು ಯಾರು? ಈ ಕುರಿತು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.