ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕ್ರೂರಿಗಳ ಅಟ್ಟಹಾಸ ಜಾಸ್ತಿಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.
ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕತ್ತರಿಸಿರುವ ಪೈಶಾಚಿಕ ಕೃತ್ಯವನ್ನು ಯಾರೂ ಸಹಿಸಲು ಸಾಧ್ಯವೇ ಇಲ್ಲ.
ಹಸುವನ್ನು ನಾವು ಗೋಮಾತೆ ಎಂದು ದೇವರಂತೆ ಪೂಜಿಸುತ್ತೇವೆ. ಅಂತಹ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವುದು ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಇದು ಖಂಡಿತ “ಆಕಸ್ಮಿಕ” ಘಟನೆಯಲ್ಲ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಡಿನ್ನರ್ಪಾರ್ಟಿ ಬಿಟ್ಟು ಎದ್ದೇಳಿ ! ಎಂದು ಜೆಡಿಎಸ್ ತಾಕೀತು ಮಾಡಿದೆ.
ಸಿದ್ದರಾಮಯ್ಯ ಅವರೇ ಇನ್ನಾದರೂ ಓಲೈಕೆ ರಾಜಕಾರಣ ಬಿಟ್ಟು, ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದ ರಕ್ತಪಿಪಾಸುಗಳಿಗೆ ಕಠಿಣವಾದ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಂಥಹ ಹೇಯ ಕೃತ್ಯಗಳು ಮರುಕಳಿಸುತ್ತಿರುವುದು ಸಮಾಜದಲ್ಲಿ ಭಯ ಮತ್ತು ಅಶಾಂತಿಯ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.