ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸಿ ಪ್ರವೃತ್ತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಕತ್ತರಿಸಿದ ಕೃತ್ಯದಿಂದ ನೊಂದ ಕುಟುಂಬದವರ ನಿವಾಸಕ್ಕೆ ತೆರಳಿ, ಮಕರ ಸಂಕ್ರಾಂತಿಯ ಶುಭದಿನದಂದು ಗೋಮಾತೆಗೆ ಪೂಜೆ ಸಲ್ಲಿಸಿ ಕುಟುಂಬದ ಸದಸ್ಯರಿಗೆ ವ್ಯಯಕ್ತಿಕವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರು 1 ಲಕ್ಷ ರೂಗಳ ನೀಡಿ ಸಾಂತ್ವನ ಹೇಳಿದರು.
ಈ ಕೃತ್ಯಗಳ ಹಿಂದಿರುವ ವ್ಯಕ್ತಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅಶೋಕ್ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಪಿ.ಸಿ ಮೋಹನ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.