ಸಚಿವರ ಕಾರು ಅಪಘಾತ, ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಆಸ್ಪತೆಗೆ ದಾಖಲು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್  ಹಾಗು ಅವರ ಸೋದರ, ವಿಧಾನ ಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಸಂಗತಿ ಕಳವಳಕಾರಿಯಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಮತ್ತಿತರರು ಹಾರೈಸಿದ್ದಾರೆ.

ಕಾರು ಅಪಘಾತದಲ್ಲಿ ಸಂಪುಟ ಸಹೋದ್ಯೋಗಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ ರವಿ ಅವರು
, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ಪ್ರಯಾಣಿಸುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಕಾರು ಬೆಳಗಿನ ಜಾವ 5 ಗಂಟೆಗೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಳರ್‌ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಬೆಳಗಾವಿಗೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್​ ರಸ್ತೆ ಬಳಿ ಇದ್ದ ಮರಕ್ಕೆ ಡಿಕ್ಕಿ ಹೊಡಿದೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ. ಅಪಘಾತ ಸಂಭವಿಸಿದ ಕೂಡಲೇ ಕಾರಿನಲ್ಲಿ ಏರ್​ಬ್ಯಾಗ್​ಗಳು ತೆರೆದುಕೊಂಡ ಕಾರಣ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಷ್ಟೇ ಆಗಿವೆ.

ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಮತ್ತು ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್​ ಎರಡು ದಿನಗಳಲ್ಲಿ ಡಿಸ್ಚಾರ್ಜ್​ ಆಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯ ಡಾ.ರವಿ ಪಾಟೀಲ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಿನ್ನೆ ರಾತ್ರಿ ಸಿಎಲ್​ಪಿ ಮೀಟಿಂಗ್ ಮುಗಿಸಿ ಬೆಳಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಮಂಗಳವಾರ ಕ್ಷೇತ್ರದಲ್ಲಿ ಎರಡ್ಮೂರು ಮುಖ್ಯವಾದ ಕೆಲಸಗಳಿದ್ದ ಹಿನ್ನೆಲೆ ರಸ್ತೆ ಮೂಲಕ ಆಗಮಿಸುತ್ತಿದ್ದರು.

ಈ ವೇಳೆ ಅವಘಡ ಸಂಭವಿಸಿದೆ. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ಮಾಡಿ ತಮ್ಮ ತಾಯಿಯವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";