ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ  ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು  ಪ್ರಯತ್ನಿಸುತ್ತಿದ್ದು ಪ್ರಸ್ತುತ ಬೆಂಗಳೂರಿನ ಮಲ್ಲೇಶ್ವರಂ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯಡಿ ಬರುವ  ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysuru.ac.in or http://ksouportal.com/reg,sc/StudyCenterRegistration.aspx ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರಗಳು) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ ಮೈಸೂರು06 ರವರಿಗೆ ಸಲ್ಲಿಸುವುದು.

- Advertisement - 

ಅರ್ಜಿಗಳನ್ನು ಸಲ್ಲಿಸಲು ಜನವರಿ 18 ಕೊನೆಯ ದಿನಾಂಕವಾಗಿರುತ್ತದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು  ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ.

ಹೆಚ್ಚಿನ ವಿವರಗಳಿಗೆ  9741197921 ಅಥವಾ 080-23448811 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ. ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";