ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಲಿಂಗಮ್ಮ ಇವರಿಗೆ ಆದಿಚುಂಚನಗಿರಿಯ ಮಠದಿಂದ ಕೊಡಲ್ಪಡುವ ಭೈರವಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮುಖ್ಯೋಪಾಧ್ಯಾಯಿನಿ ಎಸ್.ಲಿಂಗಮ್ಮ ಇವರು ನಲಿ ಕಲಿ ಶಿಕ್ಷಕಿಯಾಗಿ ತಾಲೂಕು ಮತ್ತು ಜಿಲ್ಲಾಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಉತ್ತಮ ಹೆಸರು ಪಡೆದಿದ್ದಾರೆ. ಇವರಿಗೆ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿಯಾಗಿ 2001ರಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ 80ನೇ ಜಯಂತೋತ್ಸವ ಹಾಗೂ 12ನೇ ವರ್ಷದ ಸಂಸ್ಮರಣ ಅಂಗವಾಗಿ ನಡೆದ ಸಮಾರಂಭದಲ್ಲಿ ಮುಖ್ಯೋಪಾಧ್ಯಾಯಿನಿ ಎಸ್.ಲಿಂಗಮ್ಮ ಇವರಿಗೆ ಭೈರವಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ಎಲೆಮರೆ ಕಾಯಿಯಂತೆ ಉತ್ತಮ ಸೇವೆ ಮಾಡುತ್ತಿರುವ ಮುಖ್ಯೋಪಾಧ್ಯಾಯಿನಿ ಎಸ್.ಲಿಂಗಮ್ಮ ಅವರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುವ ಕಾರ್ಯವನ್ನು ಕೆಂಪೇಗೌಡ ದಂತ ಮಹಾವಿದ್ಯಾಲಯದ ಅಧ್ಯಕ್ಷರು, ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಬೇತೂರು ಪಾಳ್ಯ ಜೆ.ರಾಜು ಇದ್ದು ಕೆಲಸ ಮಾಡಿದ್ದಾರೆ. ಭೈರವಿ ಪ್ರಶಸ್ತಿಗೆ ಬಾಜನರಾದ ಲಿಂಗಮ್ಮ ಇವರನ್ನು ರಾಜು ಅವರು ಅಭಿನಂದಿಸಿದ್ದಾರೆ.

