ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಖಂಡಿಸಿ, ನಡೆಸಿದ ಮೈಸೂರು ಚಲೋ ಪಾದಯಾತ್ರೆಯನ್ನು ಕಾಂಗ್ರೆಸ್ಸಿಗರು ಟೀಕಿಸಿದ್ದರು!! ಎಂದು ಬಿಜೆಪಿ ಕಿಡಿಕಾರಿದೆ.
ಆದರೆ ಅದೇ ಮೈಸೂರು ಚಲೋ ಪಾದಯಾತ್ರೆಯ ಎಫೆಕ್ಟ್‌ಇಂದು ಸಿದ್ದರಾಮಯ್ಯ ಅವರನ್ನು ಪರಪ್ಪನ ಅಗ್ರಹಾರಕ್ಕೆ ಚಲೋ ಎನ್ನುತ್ತಿದೆ!! ಎಂದು ಬಿಜೆಪಿ ಎಚ್ಚರಿಸಿದೆ.
ಸಿದ್ದರಾಮಯ್ಯ ಅವರೆ, ಯಾವುದೇ ಕ್ಷಣದಲ್ಲಾದರೂ ನಿಮ್ಮ ಬಂಧನ ಆಗಬಹುದು, ಅದಕ್ಕೂ ಮುಂಚೆ ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಎಂದು ಬಿಜೆಪಿ ತಾಕೀತು ಮಾಡಿದೆ.

