ಕೆಪಿಎಸ್ಸಿ ಪರೀಕ್ಷೆಗೆ ಅರ್ಧಕ್ಕಿಂತ ಹೆಚ್ಚು ಅಭ್ಯರ್ಥಿಗಳ ಗೈರು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ಶಾಂತಿಯುತವಾಗಿ ಯಾವುದೇ ಗೊಂದಲವಿಲ್ಲದೆ ಜರುಗಿತು.

ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಪತ್ರಿಕೆ1 ಸಾಮಾನ್ಯ ಪತ್ರಿಕೆಗೆ ಜಿಲ್ಲೆಯಲ್ಲಿ ಒಟ್ಟು 7783 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

- Advertisement - 

ಪೈಕಿ 3160 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4623 ಅಭ್ಯರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ  ಉಪನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";