ಚಂದ್ರವಳ್ಳಿ ನ್ಯೂಸ್, ಕುಣಿಗಲ್:
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ (ಪಟ್ಟಲದಮ್ಮ) ಸಮುದಾಯ ಭವನವನ್ನು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟನೆ ನೆರವೇರಿಸಿದರು.
ಈಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಡಿ.ನಾಗರಾಜಯ್ಯ, ಮಾಜಿ ಶಾಸಕ ಸುರೇಶ್ ಗೌಡ, ಬಿಜೆಪಿ ಮುಖಂಡ ಕೃಷ್ಣಕುಮಾರ್, ಜಗದೀಶ್ ಸೇರಿದಂತೆ ಗ್ರಾಮದ ಅನೇಕ ಹಿರಿಯರು, ಗಣ್ಯರು ಉಪಸ್ಥಿತರಿದ್ದರು.

