ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣ ಸಂಬಂಧ ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತಷ್ಟು ಅಕ್ರಮಗಳನ್ನು ಬಯಲು ಮಾಡಿದ್ದು, 600 ಕ್ಕೂ ಹೆಚ್ಚು ಸ್ಥಿರಾಸ್ತಿಗಳು ಬೇನಾಮಿ ಹೆಸರಲ್ಲಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಮುಡಾ ಸೈಟು ಹಂಚಿಕೆಯಲ್ಲಿ ಅಕ್ರಮವಾಗಿರುವುದು ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದುಕೊಂಡು ಪ್ರಕರಣ ದಾಖಲಾಗಿ ಕೋರ್ಟ್ ವಿಚಾರಣೆ ನಡೆಯುತ್ತಿದ್ದರೂ ಭಂಡತನದಿಂದ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡದೆ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ರಾಜೀನಾಮೆ ನೀಡಲು ಇನ್ನೆಷ್ಟು ದಿನ ಕಾಯುತ್ತೀರಿ ಸಿದ್ದರಾಮಯ್ಯ ಅವರೇ ? ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

