ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳಾಡುವ ಸಿಎಂ ಸಿದ್ದರಾಮಯ್ಯ ಅವರೆ, ಕೇಂದ್ರದಿಂದ ಬಂದ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಯೋಗ್ಯತೆ ನಿಮ್ಮ ಸರ್ಕಾರಕ್ಕಿಲ್ಲ ಎಂಬುದು ಸಾಬೀತಾಗಿದೆ ಎಂದು ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.
ಕೊಟ್ಟ ಅನುದಾನವನ್ನು ಖರ್ಚು ಮಾಡಿ ಸದ್ಬಳಕೆ ಮಾಡದ ನಿಮ್ಮ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು..? ಎಂದು ಬಿಜೆಪಿ ಪ್ರಶ್ನಿಸಿದೆ. ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುವ ನಿಮ್ಮ ಟೂಲ್ಕಿಟ್ಅನ್ನು ಬದಿಗಿಟ್ಟು, ಮೊದಲು ಅನುದಾನ ಸದ್ಬಳಕೆ ಮಾಡುವತ್ತ ಗಮನಹರಿಸಿ ಎಂದು ಬಿಜೆಪಿ ತಾಕೀತು ಮಾಡಿದೆ.

