ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ.
ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ ಪ್ರಕರಣದಲ್ಲಿ ಆಧಾರ ಸಹಿತವಾಗಿ ಜಾರಿ ನಿರ್ದೇಶನಾಲಯ ವರದಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಅತುರಾತುರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ನೀಡಿದೆ ಬಿಜೆಪಿ ರಾಜ್ಯಾಧ್ಯಕ್ಷರು ಆರೋಪ ಮಾಡಿದ್ದಾರೆ.

