ಜೆಡಿಎಸ್ ಶಾಸಕಿ ಮನೆಗೆ ನುಗ್ಗಿ ಆತಂಕ ಸೃಷ್ಠಿಸಿದ ಅಪರಿಚಿತರು

News Desk

ಚಂದ್ರವಳ್ಳಿ ನ್ಯೂಸ್, ರಾಯಚೂರು:
 ಜೆಡಿಎಸ್ ಶಾಸಕಿ ಮನೆಗೆ ಅಪರಿಚಿತರು ನುಗ್ಗಿ ಆತಂಕ ಸೃಷ್ಠಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ.
ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ.ನಾಯಕ ​​ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು
, ತಡವಾಗಿ ಬೆಳಕಿಗೆ ಬಂದಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಶಾಸಕಿ ಮನೆಯ ಕೂಗಳತೆ ದೂರದಲ್ಲಿ ಬೈಕ್ ನಿಲ್ಲಿಸಿದ್ದ ಅಪರಿಚಿತರ ತಂಡ, ಹಿಂಬಾಗಿಲಿನಿಂದ ಮನೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ಅಕ್ಕಪಕ್ಕದವರು ಕೂಗಿದಾಗ ಅಪರಿಚಿತರು ಪರಾರಿಯಾಗಿದ್ದಾರೆ.

- Advertisement - 

ಘಟನೆ ಬಳಿಕ ದೇವದುರ್ಗ ಪೊಲೀಸರಿಗೆ ಶಾಸಕಿ ಕರೆಮ್ಮ ಜಿ.ನಾಯಕ ಮಾಹಿತಿ ನೀಡಿದ್ದಾರೆ. ಅಪರಿಚಿತರು ಯಾಕೆ ನಮ್ಮ ಮನೆಗೆ ನುಗ್ಗಿದ್ದರು ಎಂದು ತನಿಖೆ ನಡೆಸಿ, ಅವರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಶಾಸಕಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";