ಜ.27ರಂದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಇದೇ .27ರಂದು ಬೆಳಿಗ್ಗೆ 10.30ಕ್ಕೆ ನಗರದ ಕರುವಿನ ಕಟ್ಟೆ ಸರ್ಕಲ್ ಸದ್ಗುರು ಕಬೀರಾನಂದಸ್ವಾಮಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

   ಕಬೀರಾನಂದಶ್ರಮದ ಶಿವಲಿಂಗಾನಂದ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು.

- Advertisement - 

ಸಂಸದ ಗೋವಿಂದ ಕಾರಜೋಳ ಘನಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರ  ಅಧ್ಯಕ್ಷ ತಾಜ್ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಭಾಗವಹಿಸುವರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";