ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಡಲೆ ಬೆಳೆದ ರೈತರ ನೆರವಿಗೆ ಕೇಂದ್ರದ ಎನ್‌ಡಿಎ ಮೈತ್ರಿ ಸರ್ಕಾರ ಧಾವಿಸಿದೆ ಎಂದು ಜೆಡಿಎಸ್ ತಿಳಿಸಿದೆ.
ಮುಕ್ತ ಮಾರುಕಟ್ಟೆಯಲ್ಲಿ ಕಡಲೆಕಾಳಿಗೆ ಬೆಲೆ ಕಡಿಮೆ ಇರುವುದರಿಂದ ಬೆಂಬಲ ಬೆಲೆ ಯೋಜನೆಯಡಿ(MSP) ಕರ್ನಾಟಕದಲ್ಲಿ 96,498 ಮೆಟ್ರಿಕ್ ಟನ್ ಗುಣಮಟ್ಟದ ಕಡಲೆ ಕಾಳನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ರಾಜ್ಯದ ರೈತರ ಸಂಕಷ್ಟಕ್ಕೆ ನೆರವಾಗುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಚೌಹಣ್ ಜೆಡಿಎಸ್ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ.

