ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯವನ್ನು ಕಾಡುತ್ತಿರುವ ಭೂತ ಎಂದರೆ – ಬೆಲೆ ಏರಿಕೆ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ನೀರಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ಬಸ್ ದರ ಏರಿಕೆ, ಸ್ಟ್ಯಾಂಪ್ ಡ್ಯೂಟಿ ಏರಿಕೆ, ಎಕ್ಸೈಸ್ ಡ್ಯೂಟಿ ಏರಿಕೆ, ಆಸ್ತಿ ತೆರಿಗೆ ಏರಿಕೆ, ಬಿತ್ತನೆ ಬೀಜದ ಬೆಲೆ ಏರಿಕೆ, ಹಾಲಿನ ಪ್ರೋತ್ಸಾಹಧನ ಖೋತಾ ಎಂದು ಜೆಡಿಎಸ್ ಟೀಕಿಸಿದೆ.
ಬೆಲೆ ಏರಿಸುತ್ತಿರುವ ಕಾಂಗ್ರೆಸ್‌ಸರ್ಕಾರ, ಕರ್ನಾಟಕದ ಜನರಿಗೆ ಜೀವನ ನಡೆಸಲು ಪರದಾಡುವಂತಹ ದುಸ್ಥಿತಿ ನಿರ್ಮಿಸಿದೆ ಎಂದು ಜೆಡಿಎಸ್ ಕಿಡಿ ಕಾರಿದೆ.

