ಬಡತನ ನಿರ್ಮೂಲನೆಗಾಗಿ ಸುಧಾರಣೆ ಹಾಗೂ ಅಭಿವೃದ್ದಿಯ ಆರ್ಥಿಕ ಹೆಜ್ಜೆ ಗುರುತು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ವರೆಗೂ ನಡೆದು ಬಂದ ಹಾದಿ ಬಡತನ ನಿರ್ಮೂಲನೆಗಾಗಿ ಸುಧಾರಣೆ ಹಾಗೂ ಅಭಿವೃದ್ದಿಯ ಆರ್ಥಿಕ ಹೆಜ್ಜೆ ಗುರುತುಗಳು.

ಮುಂದಿನ ಹೆಗ್ಗುರಿ ಸದೃಢ ಭಾರತ ಕಟ್ಟುವ ಮಹಾಸಂಕಲ್ಪ, 2047ರ ವೇಳೆಗೆ ವಿಶ್ವ ಮುಂಚೂಣಿಯಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುವ ಭಾರತ ನಿರ್ಮಾಣದ ಯೋಜನೆ ರೂಪಿಸಲು ಇಂದು ಸಂಸತ್ತಿನಲ್ಲಿ ಮಂಡನೆಯಾಗಿರುವ ಬಜೆಟ್ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ.

- Advertisement - 

ದೇಶದ ಕೃಷಿ, ಸಾರಿಗೆ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೆಟ್ ಮಂಡಿಸುವುದರೊಂದಿಗೆ ಸತತ 8 ಬಾರಿ ಬಜೆಟ್ ಮಂಡಿಸಿದ ಆರ್ಥಿಕ ತಜ್ಞತೆಯ ದಿಟ್ಟ ಮಹಿಳೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ದಾಖಲೆ ಬರೆದಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು.

ಪ್ರಧಾನಿ ಮೋದಿಜೀ ಅವರ ಸರ್ಕಾರವು ದೇಶದ ಆರ್ಥಿಕತೆ ಸುಭದ್ರವಾಗಿಸಿ, ವಿಕಸಿತ ಭಾರತದ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಮಂಡಿಸಿದೆ. ಜನಸಾಮಾನ್ಯರಿಗೆ ಭರವಸೆ ಮೂಡಿಸುವ ಮೂಲಕ ಮಹತ್ವದ ಹೆಜ್ಜೆಯಿಟ್ಟಿದೆ.
ಬಿ.ವೈ ವಿಜಯೇಂದ್ರ, ರಾಜ್ಯಾಧ್ಯಕ್ಷರು, ಬಿಜೆಪಿ.

- Advertisement - 

Share This Article
error: Content is protected !!
";