ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿ ಆಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ಬೆಳೆ ತೆಗೆಯಲು ರೈತ ಮಾಡುತ್ತಿರುವ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳು. ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ರೈತಪರ-ದೂರದೃಷ್ಠಿ-
ಪಿಎಂ ಧನಧಾನ್ಯ ಯೋಜನೆ ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ. ದೇಶೀಯ ಕೃಷಿಗೆ ವಿಶ್ವದರ್ಜೆಯ ಮೂಲಸೌಕರ್ಯ, ಕೃಷಿ ಉತ್ಪನ್ನಗಳ ದಾಸ್ತಾನಿಗೆ ಅತ್ಯುತ್ತಮ ವ್ಯವಸ್ಥೆ, ರಫ್ತಿಗೆ ಉತ್ತೇಜನ, ರೈತರಿಗೆ ಹೆಚ್ಚು ಆದಾಯ ಮತ್ತು ಗ್ರಾಮ ಭಾರತಕ್ಕೆ ಬಲ.
ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ. ಹೈನುಗಾರರು, ಮೀನುಗಾರರು ಸೇರಿ ಎಲ್ಲಾ ಕೃಷಿಕರಿಗೆ ಸುಲಭ ಸಾಲ. ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಆಧಾರಿತ ಸ್ಟಾರ್ ಟಪ್ ಗಳ ಉತ್ತೇಜನಕ್ಕೆ 1 ಲಕ್ಷ ಕೋಟಿ ಮೀಸಲು. ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಅತ್ಯಾಧುನಿಕ ನೀರಾವರಿ ಸೌಲಭ್ಯಕ್ಕೆ ಆದ್ಯತೆ.
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೂಲಸೌಕರ್ಯ ಉತ್ತಮಪಡಿಸಲು ಕ್ರಮ. ಅತ್ಯುತ್ತಮ ಶೀತಲೀಕರಣ ಕೇಂದ್ರಗಳ ಸ್ಥಾಪನೆ, ಸುಲಭ-ಪರಿಣಾಮಕಾರಿ ಸಂಪರ್ಕ ವ್ಯವಸ್ಥೆ, ಅತ್ಯುತ್ತಮ ಪೂರೈಕೆ ಸರಪಳಿ.
ಪಿಎಂ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ಇನ್ನೂ ಹೆಚ್ಚಿನ ರೈತರು. ಶೀಘ್ರಗತಿಯಲ್ಲಿ ವಿಮಾ ಸೌಲಭ್ಯ ಸಿಗುವಂತೆ ಮಾಡುವುದು ಹಾಗೂ ಅನ್ನದಾತನ ಸುರಕ್ಷತೆಗೆ ಅತಿಹೆಚ್ಚು ಒತ್ತು.
ಸಹಜ ಹಾಗೂ ನಿಸರ್ಗಕ್ಕೆ ಪೂರಕವಾದ ಕೃಷಿಗೆ ಮನ್ನಣೆ. ಅಂತಹ ರೈತರಿಗೆ ಎಲ್ಲಾ ರೀತಿಯ ಉತ್ತೇಜನ. ಪ್ರಧಾನಿಗಳ ಕನಸು ಮತ್ತು ವಿಕಸಿತಭಾರತ2047 ಸಾಕಾರಕ್ಕೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಆಯವ್ಯಯ ಮಹತ್ವದ ಕೊಡುಗೆ ನೀಡಲಿದೆ. ಭವಿಷ್ಯದಲ್ಲಿ ಭಾರತೀಯ ಕೃಷಿ ಕ್ಷೇತ್ರ ಮತ್ತಷ್ಟು ಸಮೃದ್ಧಿಯಾಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

