ಸ್ವಯಂ ಘೋಷಿತ ಆರ್ಥಿಕ ತಜ್ಞ ಸಾಲರಾಮಯ್ಯ ಸಾಲ ಮಾಡುವುದೇ ಸಾಧನೆಯೇ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಯಂ ಘೋಷಿತ ಆರ್ಥಿಕ ತಜ್ಞ “ಸಾಲರಾಮಯ್ಯ” ಅವರೇ ಸಾಲ ಮಾಡುವುದೇ ಸಾಧನೆಯೇ ? ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ರಾಜ್ಯವನ್ನು ಆರ್ಥಿಕ ತುರ್ತು ಪರಿಸ್ಥಿತಿಗೆ ತಳ್ಳಿರುವ ಕಾಂಗ್ರೆಸ್‌ಸರ್ಕಾರ, ಅದಕ್ಷ ಹಾಗೂ ಅಸಮರ್ಪಕ ಆಡಳಿತದಿಂದ ಕರ್ನಾಟಕವನ್ನು ದೊಡ್ಡ ಪ್ರಮಾಣದ ಸಾಲದ ಕೂಪಕ್ಕೆ ಸಿಲುಕಿಸಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

- Advertisement - 

ರಾಜ್ಯದ ಆದಾಯ ಹೆಚ್ಚಿಸುವಲ್ಲಿ ಸಂಪೂರ್ಣಎಡವಿರುವ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸವನ್ನು ಬರಿದು ಮಾಡಿದ್ದಾರೆ.

ವರ್ಷದಿಂದ ವರ್ಷಕ್ಕೆ ಸಾಲದ ಪ್ರಮಾಣ ಏರಿಕೆಯಾಗುತ್ತಿದ್ದು, ಅಸಲು ಪಾವತಿಗಿಂತ ಬಡ್ಡಿ ಪಾವತಿಯೇ ಜಾಸ್ತಿಯಾಗಿರುವುದು ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಜೆಡಿಎಸ್ ಟೀಕಿಸಿದೆ.

- Advertisement - 

ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೀಗೆ ಮುಂದುವರಿದರೆಅಧಿಕಾರದಿಂದ ಕೆಳಗಿಳಿಯುವಷ್ಟರಲ್ಲಿ ರಾಜ್ಯವನ್ನು ದಿವಾಳಿ ಮಾಡಿಯೇ ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

Share This Article
error: Content is protected !!
";