ಇಂದು ಹೆಲ್ಮೆಟ್ ಹಾಗೂ ಶಿಶು ರಕ್ಷಾ ಕವಚ ವಿತರಣೆ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ

- Advertisement - 

ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ (ಸೇಫ್ಟಿ ಹಾರ್ನೆಸ್) ವನ್ನು ಸಾಂಕೇತಿಕವಾಗಿ ವಿತರಣೆ ಮಾಡುವ ಕಾರ್ಯಕ್ರಮ ಫೆ. 12 ರಂದು ಬೆ. 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement - 

      ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿ ಸಿಂಘೆ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. 

 

- Advertisement - 

 

Share This Article
error: Content is protected !!
";